ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭೇಟಿಯ ವೇಳೆ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಇಂದು ಬೆಳಿಗ್ಗೆ 11:30 ಕ್ಕೆ ಸಿಎಂ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಗದಗ ತಾಲೂಕಿನ ಹರ್ಲಾಪುರಕ್ಕೆ ಆಗಮಿಸಲಿದ್ದಾರೆ. ಬೀರಲಿಂಗೇಶ್ವರ, ಮಾಳಿಂಗರಾಯ ದೇವಾಲಯಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ರೋಣ ಪಟ್ಟಣಕ್ಕೆ ತೆರಳಲಿದ್ದಾರೆ. ರೋಣ ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
179 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್, ಶಾಸಕ ಜಿ.ಎಸ್. ಪಾಟೀಲ್ ಸೇರಿ ಹಲವರು ಭಾಗವಹಿಸಲಿದ್ದಾರೆ.