ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ಬರಮಾಡಿಕೊಂಡು, ಕುಶಲೋಪರಿ ವಿಚಾರಿಸಿದರು. ಈ ಕುರಿತಾದ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಬಿ.ಮಾರೇನಹಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ ದೇವನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಬೋಯಿಂಗ್ ನ ಹೊಸ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ನ್ನು ಉದ್ಘಾಟಿಸಿ ನಂತರ ಬೋಯಿಂಗ್ ಸುಕನ್ಯಾ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
![](https://kannadadunia.com/wp-content/uploads/2024/01/modi-3.jpg)
![](https://kannadadunia.com/wp-content/uploads/2024/01/modi-7.jpg)