alex Certify ALERT : ‘ಮಲ ಹೊರುವ ಪದ್ಧತಿ’ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ-CM ಸಿದ್ದರಾಮಯ್ಯ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ‘ಮಲ ಹೊರುವ ಪದ್ಧತಿ’ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ-CM ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಮಲ ಹೊರುವ ಪದ್ಧತಿ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಪದ್ಧತಿ ಜೀವ ವಿರೋಧಿ ಮಾತ್ರವಲ್ಲ ಮಾನವ ಹಕ್ಕುಗಳ ಉಲ್ಲಂಘನೆ ಕೂಡ ಹೌದು. ಈ ಕೆಲಸ ಮಾಡಿಸಲು ನಮ್ಮ ರಾಜ್ಯದಲ್ಲಿ ಅವಕಾಶವನ್ನೇ ನಾವು ನೀಡುವುದಿಲ್ಲ.

ಪೌರಕಾರ್ಮಿಕರು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಮತ್ತು ಘನತೆಯಿಂದ ಬದುಕಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದೆವು, ಅವರ ಸಂಬಳವನ್ನು ₹7,000 ದಿಂದ ₹17,000 ಕ್ಕೆ ಏರಿಸಿದ್ದೆವು, ಮನೆಕಟ್ಟಿಕೊಳ್ಳಲು ₹7.5 ಲಕ್ಷ ನೆರವು ನೀಡುವ ಕಾರ್ಯಕ್ರಮ ಜಾರಿ ಮಾಡಿದ್ದೆವು. ಪೌರ ಕಾರ್ಮಿಕರ ಹಿತಕಾಯಲು ನಾವು ಈಗಲೂ ಬದ್ಧರಿದ್ದೇವೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...