ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಿವಿಧ ಮನವಿಗಳನ್ನು ಸಲ್ಲಿಸಲಿದ್ದು, ಇದೀಗ ಸಂಸತ್ ನಲ್ಲಿ ಪ್ರಧಾನಿ ಮೋದಿ ಭೇಟಿಗೆ ಸಿಎಂ ತೆರಳಿದ್ದಾರೆ.
ಬರ ಪರಿಹಾರಕ್ಕೆ ನೆರವು, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಸಹಕಾರ ಹಾಗೂ ಜಿಎಸ್ಟಿ ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಪ್ರಧಾನಿ ಮೋದಿ ಮುಂದಿಡಲಿದ್ದಾರೆ. ಬರಗಾಲದ ಕುರಿತಂತೆ ಸಮರ್ಪಕ ವಿವರಣೆ ನೀಡಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೂ ಸಿಎಂ ಸಿದ್ದರಾಮಯ್ಯ ತಮ್ಮೊಟ್ಟಿಗೆ ಕರೆದೊಯ್ಯುತ್ತಿದ್ದಾರೆ.
ಬೆಂಗಳೂರು ನಗರದ ಅಭಿವೃದ್ಧಿ ಹಾಗೂ ನಾನಾ ನೀರಾವರಿ ಯೋಜನೆಗಳ ಕುರಿತಂತೆ ಚರ್ಚಿಸಲು ಪ್ರಧಾನಿ ಭೇಟಿಗೆ ಸಿಎಂ ಸಿದ್ದರಾಮಯ್ಯ ಸಮಯ ಕೇಳಿದ್ದರು. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.