ಬೆಂಗಳೂರು : ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಸಂಕಷ್ಟದಿಂದ ಪಾರಾಗಲು ಕಾನೂನು ಸಮರಕ್ಕೆ ಮುಂದಾಗಿದ್ದು, ವಕೀಲರ ಜೊತೆ ಚರ್ಚಿಸಿದ ಬಳಿಕ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನಾನ್ಯಾಕೆ ರಾಜೀನಾಮೆ ಕೊಡಲಿ..?
ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಹೆಚ್ಡಿಕೆ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ, ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ. ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ. ಆದರೆ ನನ್ನ ವಿಚಾರದಲ್ಲಿ ಮಾತ್ರ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನಿಂದ ಒಂದೂ ಪತ್ರ ಹೋಗಿಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ನಾನು ಏಕೆ ರಾಜೀನಾಮೆ ನೀಡಬೇಕು? ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಆದರೂ ನಾನೇಕೆ ರಾಜೀನಾಮೆ ನೀಡಲಿ ಎಂದಿದ್ದಾರೆ.
ಚುನಾಯಿತ ಸರ್ಕಾರವನ್ನು ಕಿತ್ತಾಕುವ ಕೇಂದ್ರ @BJP4Indiaಸರ್ಕಾರದ ದುರುದ್ದೇಶದ ಪ್ರಯತ್ನಕ್ಕೆ ನಾವು ತಡೆಯೊಡ್ಡಬೇಕು ಎಂದು ನಿರ್ಣಯಿಸಿದ್ದೇವೆ. ನಮ್ಮ ಯಶಸ್ವೀ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ
@narendramodiಮತ್ತು @AmitShahಕೂಡ ವಿರೋಧಿಸಿದ್ದರು. ಹೀಗಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಕುಟಿಲತನವನ್ನು ಯಶಸ್ವಿಯಾಗಿ ವಿರೋಧಿಸಿ ಸತ್ಯವನ್ನು ಗೆಲ್ಲಿಸುತ್ತೇವೆ. ಅಬ್ರಹಾಂ ಎನ್ನುವವರು 26-7-2024 ರ ಬೆಳಗ್ಗೆ 11:30 ಗೆ ದೂರು ನೀಡಿದರೆ ಅದೇ ದಿನ 10 ಗಂಟೆಗೆ ರಾಜ್ಯಪಾಲರು ಶೋ ಕಾಸ್ ನೋಟಿಸ್ ರೆಡಿ ಮಾಡಿದ್ದರು. ಆದರೆ ಶಶಿಕಲಾ ಜೊಲ್ಲೆ, @hd_kumaraswamy ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ ಎಂದರು.