ಬೆಂಗಳೂರು : ಇಂಧನ ಇಲಾಖೆ ವತಿಯಿಂದ ಬೆಂಗಳೂರಿನ ಜಿಕೆವಿಕೆ ಆವರಣದ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಸೌರಶಕ್ತಿ ಮೇಳ ಆಯೋಜಿಸಲಾಗಿದ್ದು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಕೃಷಿ ಪಂಪ್ಸೆಟ್ಗಳಿಗೆ ಸೌರ ವಿದ್ಯುತ್ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಲು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಾರ್ಚ್ 9, ಶನಿವಾರದಂದು ರೈತ ಸೌರಶಕ್ತಿ ಮೇಳ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಜೊತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ʼಕುಸುಮ್ ಸಿʼ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳ ಹೊಸ ಸಬ್ಸ್ಟೇಷನ್ಗಳಿಗೆ ಚಾಲನೆ ನೀಡಲಿದ್ದಾರೆ.
ಸೋಲಾರ್ ಪಂಪ್ಸೆಟ್ ಅಳವಡಿಸಿಕೊಳ್ಳಲು ಆಸಕ್ತಿ ಇರುವ ರೈತರಿಗಾಗಿ ಆನ್ಲೈನ್ ಪೋರ್ಟಲ್ ವಿನ್ಯಾಸಗೊಳಿಸಲಾಗಿದೆ. ಮೇಳದಲ್ಲಿ ʼಸೌರ ಮಿತ್ರʼ ಆ್ಯಪ್ ಬಿಡುಗಡೆಯಾಗಲಿದ್ದು, ಈ ಆ್ಯಪ್ ಮೂಲಕ ರೈತರು ಅರ್ಜಿ ಸಲ್ಲಿಸಬಹುದು.