alex Certify Gruha Jyoti Scheme : ‘ಗೃಹಜ್ಯೋತಿ’ ಯೋಜನೆಗೆ ನಾಳೆ ಕಲಬುರಗಿಯಲ್ಲಿ ಸಿಎಂ ಅಧಿಕೃತ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Jyoti Scheme : ‘ಗೃಹಜ್ಯೋತಿ’ ಯೋಜನೆಗೆ ನಾಳೆ ಕಲಬುರಗಿಯಲ್ಲಿ ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಇಂಧನ ಸಚಿವ ಕೆ.ಜೆ ಜಾರ್ಜ್ ಈ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ 5ರಂದು ಕಲಬುರಗಿಯ ಎನ್.ವಿ. ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹಜ್ಯೋತಿ ಯೋಜನೆಗೆ ಸಿಎಂ ಚಾಲನೆ ನೀಡುವರು. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಚಿವ ಅನೇಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

1.42 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಿಂದ ಅನುಕೂಲವಾಗಲಿದೆ. 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಈ ಯೋಜನೆಯಿಂದ ಕುಟುಂಬದ ನಿರ್ವಹಣಾ ವೆಚ್ಚ ಕಡಿಮೆಯಾಗಲಿದ್ದು, ಆರ್ಥಿಕ ಪ್ರಗತಿ ಸಾಮಾಜಿಕ ಭದ್ರತೆ ಸಿಗಲಿದೆ ಎಂದು ಜಾರ್ಜ್ ಹೇಳಿದ್ದಾರೆ.ಯೋಜನೆ ಅನುಷ್ಠಾನದ ಮೊದಲ ತಿಂಗಳಿನಲ್ಲಿ 1.42 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕ ಶೂನ್ಯವಾಗಿರುತ್ತದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್ ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟಂಬರ್ ಬಿಲ್ ನಲ್ಲಿ ಪ್ರಯೋಜನ ಪಡೆಯಲಿದ್ದಾರೆ. ಗೃಃಜ್ಯೋತಿ ಯೋಜನೆ ನೋಂದಣಿ ಮಾಡಿಕೊಳ್ಳಲು ಅಂತಿಮ ದಿನಾಂಕ ಘೋಷಿಸಿಲ್ಲ. ಯಾವಾಗ ನೋಂದಾಯಿಸಿಕೊಂಡರೂ ಅದರ ನಂತರದ ತಿಂಗಳಿನಿಂದ ಸೌಲಭ್ಯ ಪಡೆಯಬಹುದು

ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಆಗಸ್ಟ್ 5 ರಂದು ಕಲಬುರಗಿಯಲ್ಲಿ ರಾಜ್ಯ ಸರ್ಕಾರದ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಮಹತ್ವದ “ಗೃಹ ಜ್ಯೋತಿ” ಯೋಜನೆಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕರೆ ನೀಡಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಗೃಹ ಜ್ಯೋತಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಕುರಿತಂತೆ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಅಂದು ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ 10 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ದರದ ವಿದ್ಯುತ್ ಬಿಲ್ಲು ನೀಡುವ ಮೂಲಕ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಕ್ಕೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ನೆರೆಹೊರೆಯ ಐದಾರು ಜಿಲ್ಲೆಗಳ ಸಚಿವರು ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಸುಮಾರು 10 ರಿಂದ 12 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಕುಳಿತುಕೊಳ್ಳಲು ಆಸನ, ಊಟ ಹಾಗೂ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಈ ಸಂಬಂಧ ನೇಮಿಸಲಾದ ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

ವೇದಿಕೆಯನ್ನು ಆಕರ್ಷಕವಾಗಿ ನಿರ್ಮಿಸಬೇಕು. ಸಾರ್ವಜನಿಕರು, ಗಣ್ಯರು ಮುಂತಾದವರು ಕಾರ್ಯಕ್ರಮದ ಸ್ಥಳ ಪ್ರವೇಶಿಸುವುದಕ್ಕೆ ಪ್ರತ್ಯೇಕ ಪ್ರವೇಶ ಕಲ್ಪಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಮುನ್ನೆಚ್ಚರಿಕೆಯಾಗಿ ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಿರಬೇಕು. ಪೊಲೀಸರು ಅಗತ್ಯ ಭದ್ರತೆ ಕೈಗೊಳ್ಳಬೇಕು. ಯಾವುದೇ ಸಮಸ್ಯೆ ಇಲ್ಲದಂತೆ ನಿರ್ವಹಿಸಬೇಕು ಎಂದು ಹೇಳಿದರು.ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗನ್ನೊಳಗೊಂಡ 14 ಸಮಿತಿಗಳನ್ನು ರಚಿಸಿದ್ದು, ಸಮಿತಿ ಸದಸ್ಯರಿಗೆ ನೀಡಲಾದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಅವರು ಸೂಚಿಸಿದರು. ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ), ಲೋಕೋಪಯೋಗಿ, ಪೊಲೀಸ್, ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕೆಂದು ಅವರು ಸಲಹೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...