ಬೆಂಗಳೂರು : ಇಂದು ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಹಬ್ಬದ ಶುಭಾಶಯ ಕೋರಿದ್ದಾರೆ.
ತ್ಯಾಗ – ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘ನಾಡಿನ ಜನತೆಗೆ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆ ಬಡಕುಟುಂಬದ ಪ್ರತೀ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ನೀಡಲು ಶಕ್ತಿಮೀರಿ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯವರ ಕುತಂತ್ರ ನೀತಿಯಿಂದಾಗಿ ಎಫ್.ಸಿ.ಐ ನವರು ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದರು. ಆ ನಂತರ ತೆಲಂಗಾಣ, ಆಂದ್ರಪ್ರದೇಶ, ಪಂಜಾಬ್ ಇನ್ನು ಮುಂತಾದ ರಾಜ್ಯಗಳನ್ನು ಸಂಪರ್ಕಿಸಿ ಅಕ್ಕಿಯನ್ನು ಖರೀದಿಸಲು ನಾವು ನಡೆಸಿದ ಪ್ರಯತ್ನ ಕೈಗೂಡಲಿಲ್ಲ ಹೀಗಾಗಿ ಜುಲೈ 1 ರಿಂದ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಬದಲಿಗೆ ಹಣ ನೀಡಲು ನಿರ್ಧರಿಸಿದ್ದೇವೆ. ಈ ಹಣದಲ್ಲಿ ಫಲಾನುಭವಿಗಳು ತಮ್ಮ ಕುಟುಂಬಕ್ಕೆ ಬೇಕಿರುವ ಆಹಾರ ಧಾನ್ಯವನ್ನು ಖರೀದಿಸಬಹುದಾಗಿದೆ’ ಎಂದು ಕೂಡ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.