‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದಿದ್ದಾರೆ.

ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ಕೋಟ್ಯಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಹಾರೈಸುತ್ತೇನೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1694236483136434468?ref_src=twsrc%5Egoogle%7Ctwcamp%5Eserp%7Ctwgr%5Etweet

ಡಿಸಿಎಂ ಶುಭ ಹಾರೈಕೆ

ಭಾರತಕ್ಕೆ ಇದು ಸಂತಸದ ದಿನ. ಇಂದು ಚಂದ್ರಯಾನ-3 ಯಶಸ್ವಿಯಾಗುತ್ತದೆ. ನಾನು ಸಮಯ ಮಾಡಿಕೊಂಡು ವೀಕ್ಷಣೆ ಮಾಡುತ್ತೇನೆ. ಚಂದ್ರಯಾನ-3 ಯಶಸ್ವಿಗೆ ಕೆಲಸ ಮಾಡಿದ ವಿಜ್ಞಾನಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ವಿಜ್ಞಾನಿಗಳ ಕೆಲಸಕ್ಕೆ ಶುಭ ಕೋರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read