ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಮಾಸದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಧಾರ್ಮಿಕ ನಂಬಿಕೆಗಳ ಪ್ರಕಾರ ಅತ್ಯಂತ ಪವಿತ್ರವಾದ ಉಪವಾಸ ವ್ರತಾಚರಣೆ ಮಾಡುವ ರಂಜಾನ್ ಮಾಸವು ನಾಡಿನಲ್ಲಿ ಸ್ನೇಹ, ಸೌಹಾರ್ದತೆ, ಸಮೃದ್ಧಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ರಂಜಾನ್ ಮಾಸದ ಆರಂಭದ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.