ಬೆಂಗಳೂರು : ಇಂದು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಸಂಭ್ರಮ. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ್ದಾರೆ.
ತ್ಯಾಗ – ಬಲಿದಾನದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಶಾಂತಿ, ಸೌಹಾರ್ದತೆಯು ನೆಲೆಸಲು ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ. ಸಮಸ್ತ ಮುಸ್ಲಿಂ ಬಂಧುಗಳಿಗೆ ಬಕ್ರೀದ್ನ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಬಲಿದಾನದ ಪ್ರತೀಕವಾದ ಈ ಹಬ್ಬವು ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ.