ಬೆಂಗಳೂರು: ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ. 15ನೇ ಹಣಕಾಸು ಆಯೋಗದ ಪ್ರಕಾರ 5495 ಕೋಟಿ ವಿಶೇಷ ಅನುದಾನವಾಗಿ ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿಗಳು ಪತ್ರ ಬರೆದು ಮನವಿ ಮಾಡಿದ್ದಾರೆ.