ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎರಡನೇ ಜನಸ್ಪಂದನ ಕಾರ್ಯಕ್ರಮ ವಿಧಾನಸೌಧದ ಮುಂದೆ ಹಮ್ಮಿಕೊಂಡಿದ್ದು, ಈ ವೇಳೆ ಬಡರೋಗಿಯ ಸಂಕಷ್ಟಕ್ಕೆ ಸ್ಥಳದಲ್ಲೆ ಸಹಾಯಧನ ಘೋಷಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಅವರು ಬೋನ್ ಮ್ಯಾರೋ ಸಮಸ್ಯೆಯಿಂದ ಬಳಲುತ್ತಿದ್ದು, ಬಡತನದಿಂದಾಗಿ ಚಿಕಿತ್ಸೆ ಪಡೆಯಲಾಗದೆ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಂಡರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಸನಗೌಡ ಬಿರಾದರ್ ಅವರ ಬೋನ್ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿ, ನೊಂದ ವ್ಯಕ್ತಿಯ ಬಾಳಿಗೆ ಬೆಳಕಾದರು.
ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.