alex Certify ರಾಜ್ಯದ ಜನರ ಗಮನಕ್ಕೆ : ನಾಳೆ ಸಿಎಂ ಸಿದ್ದರಾಮಯ್ಯ ʻಜನತಾ ದರ್ಶನʼ : ಈ ದಾಖಲೆಗಳನ್ನು ಜೊತೆಗೆ ಕೊಂಡೊಯ್ಯಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನರ ಗಮನಕ್ಕೆ : ನಾಳೆ ಸಿಎಂ ಸಿದ್ದರಾಮಯ್ಯ ʻಜನತಾ ದರ್ಶನʼ : ಈ ದಾಖಲೆಗಳನ್ನು ಜೊತೆಗೆ ಕೊಂಡೊಯ್ಯಿರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27ರ ಸೋಮವಾರ ಬೆಳಿಗ್ಗೆ 9.30 ರಿಂದ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುವ ರಾಜ್ಯಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಕೂಡಲೇ ಅಥವಾ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಿಕೊಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸಮಸ್ಯೆಗಳಿಗೆ ನೇರ ಪರಿಹಾರ ಪಡೆಯುವಂತೆ ಸೂಚನೆ ನೀಡಲಾಗಿದೆ.

ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ಜನರು ತಮ್ಮ ಗುರುತಿನ ಚೀಟಿಯಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಎಕ್ಸ್ ನಲ್ಲಿ ಸಚಿವಾಲಯ ಮಾಹಿತಿ ನೀಡಿದೆ.

ನಿಮ್ಮ ಅಹವಾಲುಗಳೊಂದಿಗೆ ಬನ್ನಿ, ಅದನ್ನು ಪರಿಹರಿಸುವ ಹೊಣೆ ನಮ್ಮದು. ನವೆಂಬರ್ 27ರ ಸೋಮವಾರ ನಡೆಯುವ ಜನತಾ ದರ್ಶನದಲ್ಲಿ ಭೇಟಿಯಾಗೋಣ ಎಂದು ಪೋಸ್ಟ್ ಮಾಡಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27 ರ ಬೆಳಗ್ಗೆ 9 :30 ರಿಂದ ಸಿಎಂ ಸಿದ್ದರಾಮಯ್ಯರಿಂದ ‘ಮುಖ್ಯಮಂತ್ರಿ ಜನತಾ ದರ್ಶನ’ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಹಾಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಕೊಡಲು ಸೂಚಿಸಲಿದ್ದಾರೆ. ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಕಳೆದ ತಿಂಗಳಿಂದ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಆರಂಭಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...