alex Certify BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ರಸ್ತೆ ಸಂಚಾರದ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ ಮಂಡ್ಯ ನಗರದ ಖಾಸಗಿ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆಯುತ್ತಿರುವ ಪತ್ರಕರ್ತರ ಅಂತರ್ ಜಿಲ್ಲಾ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೂ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿಎಂ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಸಿಎಂ ಗೆ ಸಾಥ್ ನೀಡಲಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ಕೋರಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದರೆ, ಇನ್ನೊಂದೆಡೆ ಮಂಡ್ಯದ ರೈತರಿಂದ ಕಾವೇರಿ ಪ್ರತಿಭಟನೆ ನಡೆಯುವ  ಸಾಧ್ಯತೆ  ಕೂಡ ಇದ್ದು, ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...