ಬೆಂಗಳೂರು : ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ (Siddaramaiah’s wife Parvathi) ಅವರ ಆರೋಗ್ಯ (Health) ದಲ್ಲಿ ಚೇತರಿಕೆ ಕಂಡು ಬಂದಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎಂಐಸಿಯುನಲ್ಲಿ ಚಿಕಿತ್ಸೆ ನೀಡಿ ನಂತರ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಸಿದ್ದರಾಮಯ್ಯ ಅವರ ಪತ್ನಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸದ್ಯ ಪಾರ್ವತಿ ಅವರ ಆರೋಗ್ಯ (Health) ದಲ್ಲಿ ಚೇತರಿಕೆ ಕಂಡು ಬಂದಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಬರಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು. ತಾಯಿ ಜೊತೆಗೆ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಉಳಿದುಕೊಂಡಿದ್ದರು.