
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಮಾರ್ಚ್ 20ರ ನಂತರ ಲೋಕಸಭೆ ಚುನಾವಣೆ ಅಧಿಸೂಚನೆ ಹೊರಬರುವ ಸಾಧ್ಯತೆಯಿದ್ದು, ಫೆಬ್ರವರಿ ಅಂತ್ಯದೊಳಗೆ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಸಿಎಂ ಬಯಸಿದ್ದಾರೆ ಎನ್ನಲಾಗಿದೆ.
ಫೆಬ್ರವರಿ 12 ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದೆ. 4 ತಿಂಗಳ ಅವಧಿಗೆ ಲೇಖಾನುದಾನ ಪಡೆದುಕೊಂಡು, ಜುಲೈ ಅಂತ್ಯದಲ್ಲಿ ಪೂರ್ಣ ಬಜೆಟ್ ಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.