alex Certify BREAKING : ‘ಬಜೆಟ್ ಮಂಡನೆಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ’ : ಸಿಎಂ ಸಿದ್ದರಾಮಯ್ಯ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಬಜೆಟ್ ಮಂಡನೆಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ’ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಹಳ ನಿರೀಕ್ಷೆ ಮೂಡಿದೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಾಜನತೆಯೆ ಆಶೀರ್ವಾದ ಕೇಳಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ . ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ. ವಿಶ್ವಾಸಪೂರ್ವಕವಾಗಿ….. ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...