alex Certify ‘ಜನತೆಯೇ ನನ್ನ ಪಾಲಿನ ಜನಾರ್ಧನರು, ನಿಮ್ಮ ಆಶೀರ್ವಾದ ಬೇಕು’ : ಬಜೆಟ್ ಗೂ ಮುನ್ನ ಸಿಎಂ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜನತೆಯೇ ನನ್ನ ಪಾಲಿನ ಜನಾರ್ಧನರು, ನಿಮ್ಮ ಆಶೀರ್ವಾದ ಬೇಕು’ : ಬಜೆಟ್ ಗೂ ಮುನ್ನ ಸಿಎಂ ಟ್ವೀಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಹಳ ನಿರೀಕ್ಷೆ ಮೂಡಿದೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಾಜನತೆಯೆ ಆಶೀರ್ವಾದ ಕೇಳಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ . ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ. ವಿಶ್ವಾಸಪೂರ್ವಕವಾಗಿ….. ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 14 ನೇ ಬಾರಿಗೆ ರಾಜ್ಯ ಸರ್ಕಾರದ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರ ದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದು, ರಾಜ್ಯದ ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ ನೆಟ್ಟಿದೆ. ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೊಟ್ಟ ಭರವಸೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...