ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
ಇದು ಪಕ್ಷದ ಆಂತರಿಕ ವಿಷಯವಾಗಿದ್ದು, ರಾಷ್ಟ್ರೀಯ ಅಧ್ಯಕ್ಷರು ಚರ್ಚೆ ನಡೆಸಿ ಗೊಂದಲ ಬಗೆಹರಿಸಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇನ್ನು ಉಪ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.