ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿ ಇದುವರೆಗೆ ಪರಿಹಾರ ಸಿಗದ ವರ್ಗಗಳಿಗೆ ನೆರವು ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಚಲನಚಿತ್ರ ಕಲಾವಿದರಿಗೆ ಸಲ 3000 ರೂ. ಆರ್ಥಿಕ ನೆರವು ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಅಲೆ ಸಂದರ್ಭದಲ್ಲಿ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸ್ವೀಕರಿಸಿ, ದಾಖಲೆ ಪರಿಶೀಲಿಸಿ, ಪಾರದರ್ಶಕವಾಗಿ ಆರ್ಥಿಕ ನೆರವು ಮಂಜೂರು ಮಾಡಲಾಗಿದೆ. ಅದೇ ರೀತಿ ಇದುವರೆಗೂ ಪರಿಹಾರ ಸಿಗದವರಿಗೆ ಸೂಕ್ತ ನೆರವು ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.