
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಶಾಸಕರು ಅಸಮಾಧಾನಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಶಾಸಕರಿಗೆ ವಿರೋಧವಿದ್ದರೆ ದೆಹಲಿಗೆ ಹೋಗಿ ಪಕ್ಷದ ನಾಯಕರಿಗೆ ದೂರು ನೀಡಲಿ ಎಂದು ತಿಳಿಸಿದ್ದಾರೆ.
ಇಲ್ಲಿ ಹಗುರವಾಗಿ ಮಾತನಾಡುವ ಮೂಲಕ ಪಕ್ಷಕ್ಕೆ ಧಕ್ಕೆ ತರಬೇಡಿ. ಬೇಕಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಲಿ. ಇದಕ್ಕೆ ನನ್ನ ಅಭ್ಯಂತರವೇನೂ ಇಲ್ಲ. ಏನೇ ಇದ್ದರೂ ಬಿಜೆಪಿ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.