
ಬೆಂಗಳೂರು: ಬಜೆಟ್ ಮಂಡನೆ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಚರ್ಚೆಯ ನಂತರ ಬಜೆಟ್ ದಿನಾಂಕ ನಿಗದಿ ಮಾಡಲಾಗುವುದು. ತಯಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಒಂದು ವಾರದಲ್ಲಿ ಬಜೆಟ್ ಪೂರ್ವಭಾವಿ ಸಭೆ ಪೂರ್ಣಗೊಳಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಸಿಎಂ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದು, ಈ ಬಾರಿ ರೈತ ಪರ ಬಜೆಟ್ ಮಂಡಿಸಲಿದ್ದಾರೆ ಎನ್ನಲಾಗಿದೆ.