ಸಿಎಂ ಬಗ್ಗೆ ನಾನು ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಯಾರು ಬೇಕು? ಯಾರು ಬೇಡವೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಕೋವಿಡ್ ನಿರ್ವಹಣೆ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ನಾನು ಸಿಎಂ ಅವರ ಬಗ್ಗೆ ಮಾತನಾಡಿಲ್ಲ. ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ನಾನು ಒಂದು ವೇಳೆ ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ನಾನು ಏನೇ ಮಾತನಾಡಿದರೂ ವಿವಾದವಾಗುತ್ತದೆ. ಒಂದು ವಾರದಿಂದ ಹೀಗೆ ಆಗುತ್ತಿದೆ. ನಾನು ಯಾವುದೇ ಹೇಳಿಕೆ ನೀಡಲ್ಲ. ಸಿಎಂ ಅವರು ರಾಜೀನಾಮೆ ಬಗ್ಗೆ ನೀಡಿದ ಹೇಳಿಕೆ ಕುರಿತಾಗಿ ನನಗೇನೂ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.