
ಬೆಂಗಳೂರು: ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12 ರವರೆಗೂ ಮುಂದುವರೆಯಲಿದ್ದು, ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ಮೇ 10 ರಂದು ನಿರ್ಧರಿಸಲಾಗುವುದು.
ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಸೋಂಕಿನ ಪ್ರಮಾಣದಲ್ಲಿ ಕಡಿಮೆಯಾಗದಿದ್ದರೆ ಕರ್ಫ್ಯೂ ಮುಂದುವರೆಸುವ ಅಥವಾ ಮುಕ್ತಾಯಗೊಳಿಸುವ ಬಗ್ಗೆ ಮೇ 10 ರಂದು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ದೇಶಾದ್ಯಂತ ಸೋಂಕು ಪ್ರಮಾಣ ಹೆಚ್ಚಾಗಿರುವುದರಿಂದ ಕೇಂದ್ರ ಸರ್ಕಾರ ಲಾಕ್ ಡೌನ್ ಬಗ್ಗೆ ಯಾವುದಾದರೂ ನಿರ್ಧಾರಕ್ಕೆ ಬಂದರೆ ರಾಜ್ಯದಲ್ಲಿ ಗೊಂದಲವಾಗಬಹುದು. ಹಾಗಾಗಿ, ಮೇ 10 ರವರೆಗೂ ಕಾದುನೋಡಿ ಮೇ 12 ರ ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.