ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿಯ ಎರಡನೇ ದಿನ ಕುತೂಹಲ ಮೂಡಿಸಿದೆ. ಮೊದಲ ದಿನ ಪ್ರಧಾನಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದ ಸಿಎಂ ಇವತ್ತು ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆಯ ಬಗ್ಗೆ ಯಡಿಯೂರಪ್ಪನವರಿಗೆ ಇವತ್ತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.
ದೆಹಲಿ ಬೆಳವಣಿಗೆಯ ಮೇಲೆ ಬಿಜೆಪಿ ನಾಯಕರು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿ ಬೆಳವಣಿಗೆಗಳ ಬಗ್ಗೆ ಶಾಸಕರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಪರ ಮತ್ತು ವಿರೋಧ ಬಣದಲ್ಲಿ ಕುತೂಹಲ ಹೆಚ್ಚಾಗಿದೆ. ದೆಹಲಿ ಬೆಳವಣಿಗೆಗಳ ಬಗ್ಗೆ ಶಾಸಕರು ಮಾಹಿತಿ ಸಂಗ್ರಹಿಸತೊಡಗಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ವರಿಷ್ಠರ ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.