ಬೆಂಗಳೂರು: ಕೊರೋನಾ ಲಸಿಕೆ ಮೊದಲ ಡೋಸ್ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎರಡನೇ ಡೋಸ್ ಮುಗಿಯುವವರೆಗೆ ಮೊದಲ ಡೋಸ್ ಲಸಿಕೆ ನೀಡುವುದು ಬೇಡವೆಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟ ಆದೇಶ ನೀಡಿದ್ದಾರೆ.
ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಮೊದಲ ಡೋಸ್ ಕೊಡಬೇಡಿ, ಎರಡನೇ ಡೋಸ್ ಲಸಿಕೆ ಪಡೆಯುವವರಿಗೆ ಆದ್ಯತೆ ನೀಡಿ ಎಂದು ವಿಡಿಯೋಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಈಗಾಗಲೇ ಕೇಂದ್ರದಿಂದ ಬಂದಿರುವ ವ್ಯಾಕ್ಸಿನ್ ಹಂಚಿಕೆ ಮಾಡಲಾಗಿದೆ. ಹೆಚ್ಚುವರಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರದಿಂದ ಹೆಚ್ಚುವರಿ ಲಸಿಕೆ ಬಂದ ತಕ್ಷಣ ವ್ಯಾಕ್ಸಿನ್ ಹಂಚಿಕೆ ಮಾಡೋಣ. ಸದ್ಯಕ್ಕೆ ಎರಡನೇ ಡೋಸ್ ಕೊಡಲು ಆದ್ಯತೆ ನೀಡಿ ಎಂದು ಸಿಎಂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.