alex Certify ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. 2021 ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತಡೆಹಿಡಿದಿದ್ದ ಹಣಕಾಸು ಇಲಾಖೆಯ ತೀರ್ಮಾನವನ್ನು ಸಿಎಂ ಹಿಂಪಡೆದಿದ್ದಾರೆ.

ಸರ್ಕಾರಿ ನೌಕರರ ಒಕ್ಕೂಟ ಮತ್ತು ಸಚಿವಾಲಯ ನೌಕರರ ಸಂಘ ಈ ಕುರಿತು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿತ್ತು. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಕಾರಣ ನೌಕರರ 15 ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿಯಲಾಗಿತ್ತು. 2021 ರ ವರೆಗೂ ಈ ಆದೇಶವನ್ನು ವಿಸ್ತರಿಸಿದ್ದು, ಸರ್ಕಾರಿ ನೌಕರರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸಿಎಂ ಆದೇಶ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...