ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗಾಗಿ ಉಚಿತವಾಗಿ ಟ್ಯಾಬ್ ನೀಡಲಾಗುವುದು. ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಟ್ಯಾಬ್ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.