ಬೆಂಗಳೂರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.
ಈ ಕುರಿತಾಗಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಕೂಡ ದೂರು ನೀಡಲಾಗಿದೆ.
ಪಂಚಾಯತ್ ರಾಜ್ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಚಿವರ ಅಧಿಕಾರ ಮೊಟಕುಗೊಳಿಸಿದ್ದಾರೆ. 1200 ಕೋಟಿ ರೂಪಾಯಿ ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನಕ್ಕೆ ಸಂಬಂಧಿಸಿದಂತೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದಾಗಿ ದೂರು ನೀಡಿದ್ದಾರೆ.