ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರೈತರಿಗೆ ತೊಂದರೆಯಾಗುವಂತಿದ್ದರೆ ಕಸ್ತೂರಿರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲವೆಂದು ತಿಳಿಸಿದ್ದಾರೆ. ಪಶ್ಚಿಮಘಟ್ಟ ಸಂರಕ್ಷಣೆ ಕುರಿತಾಗಿ ಕಸ್ತೂರಿರಂಗನ್ ಅವರು ಸಲ್ಲಿಸಿದ ವರದಿ ಜಾರಿ ಮಾಡಿದರೆ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂಬ ಆತಂಕವಿದೆ.ಅದಕ್ಕೆ ಅವಕಾಶ ನೀಡುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.