alex Certify ರೈತರಿಗೆ ನಿವೇಶನ: ಸಿಎಂ ಯಡಿಯೂರಪ್ಪ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ನಿವೇಶನ: ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಂತ್ರಸ್ತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿಮಗೆ ನಿವೇಶನ ನೀಡುವುದು ನನ್ನ ಜವಾಬ್ದಾರಿ. ನನ್ನ ಮೇಲೆ ನಂಬಿಕೆ ಇಡಿ. ಯಾವುದೇ ಕಾರಣಕ್ಕೂ ನಿಮಗೆ ಅನ್ಯಾಯ ಆಗಲು ಬಿಡುವುದಿಲ್ಲ’ ಎಂದು ಭರವಸೆ ನೀಡಿದ್ದಾರೆ.

2007 ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದಂತಹ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ನಿವೇಶನ ನೀಡುವುದಾಗಿ ತಿಳಿಸಿದ್ದರು. ಅವರ ಭರವಸೆಯ ಮೇರೆಗೆ ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಟ್ಟಿದ್ದರು. ಆದರೆ ಈ ವರೆಗೆ ನಿವೇಶನ ನೀಡಿಲ್ಲ ಎಂದು ಸಂತ್ರಸ್ತ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಇದಕ್ಕೆ ಸ್ಪಂದಿಸಿದ ಸಿಎಂ ನಿವೇಶನ ನೀಡುವುದಾಗಿ ಹೇಳಿದ್ದಾರೆ.

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯ್‌ಕುಮಾರ್, ಪಿಎಲ್‌ಡಿ ಬ್ಯಾಂಕ್‌ನ ಉಪಾಧ್ಯಕ್ಷರಾದ ಆರ್. ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿಲ್ ಕುಮಾರ್.ಜಿ ಹಾಗೂ ಸಂತ್ರಸ್ಥ ರೈತರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...