ಪದತ್ಯಾಗದ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು ಹೈಕಮಾಂಡ್ ವಿಶ್ವಾಸ ಇರುವವರೆಗೆ ಮುಂದುವರೆಯುತ್ತೇನೆ. ಇಲ್ಲದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ತಂದಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೀಗೆ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ತೆರೆಮರೆಯ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಇಂತಹದೊಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ತಾವು ಪದತ್ಯಾಗಕ್ಕೂ ಸಿದ್ಧ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರುವವರೆಗೆ ಮುಂದುವರೆಯುತ್ತೇನೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದು, ಹೈಕಮಾಂಡ್ ಸೂಚನೆ ನೀಡಿದ ಕೂಡಲೇ ಸಿಎಂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಿಎಂ ಕೆಳಗಿಳಿದರೆ ಪರ್ಯಾಯ ನಾಯಕ ಯಾರು ಎನ್ನುವ ಚರ್ಚೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆಸುವ ಸಾರಥಿ ಯಾರು? ಯಡಿಯೂರಪ್ಪನವರನ್ನು ಬಿಟ್ಟರೆ ಸ್ಟ್ರಾಂಗ್ ಲೀಡರ್ ಯಾರಿದ್ದಾರೆ ಎನ್ನುವ ಚರ್ಚೆ ನಡೆದಿದೆ. ಹೊಸ ನಾಯಕನ ಆಯ್ಕೆ ಬಗ್ಗೆಯೂ ಹೈಕಮಾಂಡ್ ವಲಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.