alex Certify BIG BREAKING: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ – ರಾಜೀನಾಮೆ ಮಾತನಾಡಿದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ – ರಾಜೀನಾಮೆ ಮಾತನಾಡಿದ ಸಿಎಂ ಯಡಿಯೂರಪ್ಪ

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದೆ.

ಸಿಎಂ ಪುತ್ರ ವಿಜಯೇಂದ್ರ ದೆಹಲಿಯ ಭೇಟಿ ಬಳಿಕ ಯಡಿಯೂರಪ್ಪ ಇಂತಹ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎನ್ನುವ ಕುರಿತಾಗಿ ಚರ್ಚೆ ನಡೆದಿರುವ ಹೊತ್ತಲ್ಲೇ ಇಂತಹ ಹೇಳಿಕೆ ಬಂದಿದೆ.

ಭಿನ್ನರ ಬಣದ ಹೋರಾಟಕ್ಕೆ ಹೈಕಮಾಂಡ್ ಲೆವೆಲ್ ನಲ್ಲಿ ಪುಷ್ಠಿ ಸಿಕ್ಕಿದ್ದು, ಇಂದು ಸಿಎಂ ಯಡಿಯೂರಪ್ಪ ನೀಡಿರುವ ಹೇಳಿಕೆ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ಹೈಕಮಾಂಡ್ ಸೂಚಿಸಿದರೆ ನಾನು ರಾಜೀನಾಮೆ ನೀಡುತ್ತೇನೆ. ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ನಾನು ಒಪ್ಪಲ್ಲ ಎಂದು ಯಡಿಯೂರಪ್ಪ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ನಾನು ಗೊಂದಲದಲ್ಲಿಲ್ಲ. ಹೈಕಮಾಂಡ್ ವಿಶ್ವಾಸವಿರುವವರೆಗೆ ಮುಂದುವರೆಯುತ್ತೇನೆ ಎಂದು ಅವರು ಹೇಳಿದ್ದು, ಅವರು ನೀಡಿದ ಹೇಳಿಕೆ ಸಂಚಲನ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...