ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮೆಜೆಸ್ಟಿಕ್ ಸಮೀಪದ ಅಣ್ಣಮ್ಮದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ದೂರವಾಗಲಿ. ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ತಾಯಿ ದರ್ಶನ ಪಡೆದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ಯಾವಾಗ ಎನ್ನುವುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಜನತಾ ಕರ್ಫ್ಯೂ ಜನ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಎಚ್ಚರಿಕೆಗಳನ್ನು ಗಮನಿಸುತ್ತಿಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಮಾಡುತ್ತಿಲ್ಲ ಎಂದು ಹೇಲಿದ್ದಾರೆ.
ರಾಜ್ಯದಲ್ಲಿ ಸರಿಯಾಗಿ ಲಾಕ್ಡೌನ್ ಪಾಲನೆ ಮಾಡುತ್ತಿಲ್ಲ. ಹೀಗಾಗಿ ಬಿಗಿ ಕ್ರಮ ಅನಿವಾರ್ಯವಾಗಬಹುದು. ಇಂದು ಅಥವಾ ನಾಳೆ ಇದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.