ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹತ್ತಿಕ್ಕಲು ಜನತಾ ಕರ್ಫ್ಯೂ ಜಾರಿ ಮಾಡಿ ಒಂದು ವಾರ ಕಳೆದರೂ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ದಿನೇದಿನೇ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇನ್ನೂ ಎರಡು ವಾರ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. ಕೊರೊನಾ ಹತ್ತಿಕ್ಕಲು ಸಿಎಂ ಯಡಿಯೂರಪ್ಪ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಜನತಾ ಕರ್ಫ್ಯೂ ವಿಫಲವಾಗಿದ್ದು ಲಾಕ್ ಡಾನ್ ವಿಸ್ತರಣೆಗೆ ಹೆಚ್ಚಿನ ಒತ್ತಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಕಾಲ್ ಡೌನ್ ಜಾರಿಗೆ ಮುಂದಾಗಿದೆ. ಅಲ್ಲದೆ, ಲಾಖ್ ಡೌನ್ ಮಾಡುವಂತೆ ಆಡಳಿತ ಪಕ್ಷದ ನಾಯಕರು, ಸಚಿವರು, ಕೇಂದ್ರ ಮತ್ತು ರಾಜ್ಯ ಸಚಿವರು, ಶಾಸಕರು, ವಿರೋಧಪಕ್ಷಗಳು ಒತ್ತಾಯಿಸಿವೆ. ಲಾಕ್ ಡೌನ್ ಮಾಡದಿದ್ದರೆ ಪರಿಸ್ಥಿತಿ ಚಿಂತಾಜನಕವಾಗಲಿದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಇನ್ನೂ ಎರಡು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.