ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೋರೋಣ ಸ್ಥಿತಿಗತಿಗಳ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಲಾಕ್ಡೌನ್ ಜಾರಿಗೆ ಸಲಹೆ ನೀಡಿದ್ದರು. ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಲಾಕ್ಡೌನ್ ಜಾರಿಗೆ ಪ್ರಸ್ತಾಪಿಸಿದ್ದರು.
ಸಿಎಂ ಯಡಿಯೂರಪ್ಪ ಲಾಕ್ಡೌನ್ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದು, ಕೆಲವೇ ಹೊತ್ತಿನಲ್ಲಿ ಸರ್ಕಾರದ ನಿರ್ಧಾರ ಪ್ರಕಟಿಸಲಾಗುವುದು. ಲಾಕ್ ಡೌನ್ ಜಾರಿ ಬಗ್ಗೆ ಚರ್ಚಿಸುತ್ತೇವೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ನೀಡಿದ ಸಲಹೆ ಪರಿಗಣಿಸಲಾಗಿದೆ. ಈ ವಿಚಾರದ ಬಗ್ಗೆ ನಂತರ ನಾನು ಚರ್ಚೆ ಮಾಡುತ್ತೇನೆ. ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.