ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯಲು ಮುಂದಾಗಿರುವ ಸರ್ಕಾರದಿಂದ ಕೆಲವೇ ಹೊತ್ತಿನಲ್ಲಿ ಕಠಿಣ ನಿಯಮ ಜಾರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ.
ಇಡೀ ರಾಜ್ಯಕ್ಕೆ ಅಥವಾ ಬೆಂಗಳೂರಿಗೆ ಲಾಕ್ಡೌನ್ ಅಥವಾ ಕಂಪ್ಲೀಟ್ ಕರ್ಫ್ಯೂ ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರದ ವತಿಯಿಂದ ಕೆಲವೇ ಹೊತ್ತಿನಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.
ರಾಜ್ಯ ಸರ್ಕಾರ ಲಾಕ್ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸಲಾಗುವುದು. ತಜ್ಞರ ಶಿಫಾರಸು ಆಧರಿಸಿ ಕಂಪ್ಲೀಟ್ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿಗೊಳಿಸಲಾಗುತ್ತದೆ.
ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ನಾಯಕರ ಸಭೆ ನಡೆದಿದ್ದು ಸಭೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ರಾಜ್ಯಪಾಲರೂ ಕೂಡಾ ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಎಂ ಸ್ವತಂತ್ರರು ಎಂದು ಹೇಳಿದ್ದು, ಸಂಕಷ್ಟದ ಸಮಯದಲ್ಲಿ ಜನರ ಸಹಕಾರ ಅಗತ್ಯ ಎಂದು ಹೇಳಿದ್ದಾರೆ. ಸಭೆಯಲ್ಲಿ ನಾಯಕರು ನೀಡಿದ ಸಲಹೆ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿರಿಯ ಸಚಿವರು, ತಜ್ಞರೊಂದಿಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ಅಗತ್ಯ ವಸ್ತು, ಸೇವೆ ಕೆಲವೊಂದು ಕಾರ್ಯಚಟುವಟಿಕೆಗೆ ವಿನಾಯಿತಿ ನೀಡಿ ಕಠಿಣ ನಿಯಮ ಜಾರಿಗೊಳಿಸಲಾಗುವುದು ಎನ್ನಲಾಗಿದೆ.