ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ವಿಶೇಷ ಪ್ಯಾಕೇಜ್ ನಲ್ಲಿ ನೆರವು ನೀಡಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿ ವಿವಿಧ ವಲಯದವರಿಗೆ ನೆರವು ಸಿಕ್ಕಿದ್ದು ಉಳಿದವರಿಗೂ ಆರ್ಥಿಕ ನೆರವು ನೀಡಲಾಗುವುದು.
ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ಸಿದ್ಧತೆ ನಡೆಸಲಾಗಿದ್ದು, ಇನ್ನು ಎರಡು ಮೂರು ದಿನದಲ್ಲಿ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೂನ್ 6 ರಂದು ರಾಜ್ಯದ ಪರಿಸ್ಥಿತಿಯನ್ನು ನೋಡಿಕೊಂಡು ಲಾಕ್ಡೌನ್ ಮುಂದುವರೆಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಲಾಕ್ಡೌನ್ ಕುರಿತಾಗಿ ತಜ್ಞರು ವರದಿ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.