ಬೆಂಗಳೂರು: ಕೋವಿಡ್ ಆಸ್ಪತ್ರೆ ವೈದ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.
ಸೋಂಕು ತಗುಲಿ ಆಸ್ಪತ್ರೆಯಲ್ಲಿರುವ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದ್ದಾರೆ. ಆಸ್ಪತ್ರೆಗಳ ಸ್ಥಿತಿಗತಿ, ವೈದ್ಯಕೀಯ ಸೌಲಭ್ಯ, ಸಿಬ್ಬಂದಿ, ವ್ಯವಸ್ಥೆ ಆಕ್ಸಿಜನ್ ಪೂರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತಾಗಿ ವೈದ್ಯರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ.
ವೈದ್ಯರಿಂದ ಮಾಹಿತಿ ಪಡೆದುಕೊಂಡ ಸಿಎಂ ಯಡಿಯೂರಪ್ಪ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ರೋಗಿಗಳ ಸಂಬಂಧಿಕರು, ಆಂಬುಲೆನ್ಸ್ ಸಿಬ್ಬಂದಿಗಳೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.
ಅದೇ ರೀತಿ ವಿವಿಧ ಆಸ್ಪತ್ರೆಗಳ ಆಡಳಿತಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆ ಮುಖ್ಯಸ್ಥರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದು, ಸರ್ಕಾರದ ಜೊತೆಗೆ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ತಿಳಿಸಿದ್ದಾರೆ. ಹೆಚ್ಚು ಬೆಡ್ ಒದಗಿಸಲು ವಿಶೇಷ ಪ್ರಯತ್ನ ಮಾಡಬೇಕೆಂದು ಹೇಳಿದ್ದಾರೆ. ಅಗತ್ಯವಿರುವ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಐಸಿಯು ಔಷಧಗಳ ವ್ಯವಸ್ಥೆಗೆ ಸಿಎಂ ಸೂಚಿಸಿದ್ದಾರೆ.