ಬೆಂಗಳೂರು: ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾ ಯಾವುದೇ ರೀತಿಯಲ್ಲಿಯೂ ಕಡಿತವಾಗದಂತೆ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಆಕ್ಸಿಜನ್ ಟ್ಯಾಂಕರ್ ಫಿಲ್ಲಿಂಗ್ ಅವಧಿ ಕಡಿತಗೊಳಿಸಲು, ತಡೆರಹಿತ ಪ್ರಯಾಣಕ್ಕೆ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಬೇಕು. ಟೋಲ್ ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ನಿರ್ದೇಶಿಸಬೇಕು ಎಂದು ಹೇಳಿದ್ದಾರೆ.
ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನ ಚಾಲನೆಗೆ ಎಲ್ಪಿಜಿ ಟ್ಯಾಂಕರ್ ಚಾಲಕರ ಪಟ್ಟಿ ಸಿದ್ಧಪಡಿಸಿಕೊಂದು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳಬೇಕು. ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರಿಗೆ ಸಮಸ್ಯೆ ಇದ್ದಲ್ಲಿ ನಿಯೋಜಿಸಲಾದ ಅಧಿಕಾರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.