
ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.
ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರು ಎಷ್ಟೇ ಟೀಕಿಸಿದರೂ ಅವರು ಅಧಿಕಾರದಲ್ಲಿದ್ದಾಗ ಯಾರಿಗೆ ಏನು ಮಾಡಿದ್ದಾರೆ ಎನ್ನುವುದು ಜಗತ್ತಿಗೆ ಗೊತ್ತಿದೆ ಎಂದು ಸಿಎಂ ಹೇಳಿದ್ದಾರೆ.