ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತರು, ಅಸಂಘಟಿತ ಕಾರ್ಮಿಕರು, ಬಡವರಿಗೆ 1250 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇನ್ನಷ್ಟು ವರ್ಗಗಳಿಂದ ಪ್ಯಾಕೇಜ್ ಗೆ ಬೇಡಿಕೆ ಬಂದಿದೆ.
ಖಾಸಗಿ ಶಾಲೆ ಶಿಕ್ಷಕರು, ಆಡಳಿತ ಮಂಡಳಿಗಳು, ಚಿತ್ರೋದ್ಯಮ ಕಾರ್ಮಿಕರು, ಈಜುಕೊಳ, ಜಿಮ್ ಮಾಲೀಕರು, ಮೀನುಗಾರರು ಸೇರಿದಂತೆ ವಿವಿಧ ವರ್ಗಗಳವರು ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ.
ಖಾಸಗಿ ಶಾಲೆ ಶಿಕ್ಷಕರು ಸಂಕಷ್ಟದಲ್ಲಿದ್ದು ಯಾವುದೇ ಪ್ಯಾಕೇಜ್ ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಸುಮಾರು ಶೇಕಡ 50 ರಷ್ಟು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕಳೆದ ವರ್ಷ ಮಾರ್ಚ್ ನಿಂದ ವೇತನ ನೀಡಿಲ್ಲ. ಇದರಿಂದಾಗಿ ಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ. ಅದೇ ರೀತಿ ಮೀನುಗಾರರಿಗೆ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಮಾಡಲಾಗಿದೆ. ಚಿತ್ರೋದ್ಯಮದ ಕಾರ್ಮಿಕರಿಗೆ ಪ್ಯಾಕೇಜ್ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ.