ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ.
ಸರ್ಕಾರ ರಚನೆಗೆ ಕಾರಣರಾದ ವಲಸಿಗ ಸಚಿವರು ದಿಢೀರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ಯಡಿಯೂರಪ್ಪ ನನ್ನನ್ನು ಮುಟ್ಟಿದರೆ ಸರ್ಕಾರಕ್ಕೆ ಅಪಾಯ ಎಂಬ ಸಂದೇಶವನ್ನು ನೀಡಿದ್ದಾರೆ. ಸ್ವಾಮೀಜಿಗಳು, ಅನೇಕ ಸಮುದಾಯಗಳ ಭಾರೀ ಬೆಂಬಲದ ನಂತರವೂ ಹೈಕಮಾಂಡ್ ರಾಜೀನಾಮೆಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಆದರೆ, ಇದರ ಬೆನ್ನಲ್ಲೇ ವಲಸಿಗ ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸಚಿವರಾದ ಬಿ.ಸಿ. ಪಾಟೀಲ್, ಡಾ.ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಶಿವರಾಮ ಹೆಬ್ಬಾರ ಮೊದಲಾದವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸಿಎಂ ರಾಜೀನಾಮೆಯಿಂದ ವಲಸಿಗರ ಭವಿಷ್ಯ ಪ್ರಶ್ನಾರ್ಹವಾಗಿದೆ. ಸಿಎಂ ಬದಲಾದರೆ ಅತಂತ್ರರಾಗುವ ಕಾರಣಕ್ಕೆ 6 ಸಚಿವರು ರಾಜೀನಾಮೆ ಪತ್ರದೊಂದಿಗೆ ಸಿಎಂ ಭೇಟಿಗೆ ತೆರಳಿದ್ದಾರೆ. ಸರ್ಕಾರ ರಚನೆಗೆ ಕಾರಣದ ಸಚಿವರು ಸಿಎಂ ಬೆಂಬಲಕ್ಕೆ ನಿಂತಿದ್ದು, ರಾಜೀನಾಮೆ ನೀಡಲು ಕೂಡ ಮುಂದಾಗಿರುವುದು ಮಹತ್ವದ ಬೆಳವಣಿಗೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.