ಬೆಂಗಳೂರು: ಕಳೆದ ವರ್ಷದಂತೆ ಈ ಶೈಕ್ಷಣಿಕ ವರ್ಷದಲ್ಲಿಯೂ ಖಾಸಗಿ ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯ ಸದಸ್ಯ ಯೋಗಾನಂದ ನೇತೃತ್ವದಲ್ಲಿ ಖಾಸಗಿ ಶಾಲೆಗಳ ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕೋವಿಡ್ ಲಾಕ್ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಶೇಕಡ 30 ರಷ್ಟು ಶುಲ್ಕ ಕಡಿತಗೊಳಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಲ್ಲಿ ಇದಕ್ಕಿಂತ ಹೆಚ್ಚಿನ ಶುಲ್ಕವನ್ನು ಕಡಿತಗೊಳಿಸಬೇಕು. ಸಂಕಷ್ಟದಲ್ಲಿರುವ ಪೋಷಕರಿಗೆ ನೆರವಾಗಬೇಕು ಎಂದು ಮನವಿ ಮಾಡಲಾಗಿದೆ. ಮನವಿ ಸ್ವೀಕರಿಸಿದ ಸಿಎಂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.