ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ.
8 ಇಲಾಖೆಗಳ ಜೊತೆಗೆ ಸಿಎಂ ಶಾಲೆ ಆರಂಭಿಸಲು ದಿನಾಂಕ ನಿಗದಿ ಮಾಡಬೇಕೇ? ಬೇಡವೇ? ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ. ಮೊದಲ ಹಂತದಲ್ಲಿ 9 ರಿಂದ 12 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸುವ ಸಾಧ್ಯತೆ ಇದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರ ಸಂಘಟನೆಗಳು, ಪೋಷಕರು, ಎಸ್ಡಿಎಂಸಿ ಸಮಿತಿಯೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಶಿಕ್ಷಣ ಇಲಾಖೆ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಕೊರೋನಾ ಪರಿಣಾಮವನ್ನು ಅವಲೋಕಿಸಿ ಶಾಲೆಗಳನ್ನು ತೆರೆಯಲು ಶಿಫಾರಸು ಮಾಡಲಾಗಿದ್ದು, ಇಂದಿನ ಸಭೆಯಲ್ಲಿ ಹಂತಹಂತವಾಗಿ ಶಾಲೆಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.