alex Certify BREAKING NEWS: ಶಿವಮೊಗ್ಗದಲ್ಲಿ ಸ್ಪೋಟ, ಉನ್ನತ ಮಟ್ಟದ ತನಿಖೆ – ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ ಸ್ಪೋಟ, ಉನ್ನತ ಮಟ್ಟದ ತನಿಖೆ – ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹುಣಸೋಡು ಬಳಿ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲರೂ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದು, ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...