alex Certify BIG NEWS: ಹುಣಸೋಡು ಕಲ್ಲು ಕ್ವಾರೆ ಸ್ಪೋಟ: ಎಲ್ಲಾ ಆಯಾಮದಿಂದಲೂ ತನಿಖೆ –ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಣಸೋಡು ಕಲ್ಲು ಕ್ವಾರೆ ಸ್ಪೋಟ: ಎಲ್ಲಾ ಆಯಾಮದಿಂದಲೂ ತನಿಖೆ –ಸಿಎಂ ಮಾಹಿತಿ

ಶಿವಮೊಗ್ಗ: ಹುಣಸೋಡು ದುರ್ಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಗುರುವಾರ ರಾತ್ರಿ ಹುಣಸೋಡು ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಇದುವರೆಗೆ 6 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಹೈದ್ರಾಬಾದ್‍ನಿಂದ ಆಗಮಿಸಿದ ಡೈರೆಕ್ಟರ್ ಆಫ್ ಎಕ್ಸ್‍ಪ್ಲೋಸಿವ್‍ಸ್ ತಂಡ ಈಗಾಗಲೇ ಪ್ರಾಥಮಿಕ ತನಿಖೆಯನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯವಾಗಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಘಟನೆಯ ತನಿಖೆಯನ್ನು ನಡೆಸುತ್ತಿದೆ. ದುರ್ಘಟನೆಯಲ್ಲಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಘಟನೆಯಲ್ಲಿ ಸ್ಫೋಟಕದ ಬಳಕೆ, ಅದು ಎಲ್ಲಿಂದ ಬಂತು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಪ್ರದೇಶದಲ್ಲಿರುವ ಎಲ್ಲಾ ಕ್ರಶರ್ ಗಳು ಪರವಾನಿಗೆ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ. ಆದರೆ, ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವುದಿಲ್ಲ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕುರಿತು ಸರ್ಕಾರ ಮರು ಪರಿಶೀಲನೆ ನಡೆಸಲಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆಯಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...