alex Certify ರೈತರು, ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸೊರಬ ತಾಲೂಕು ಆನವಟ್ಟಿಯಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳ ಅನುಷ್ಟಾನಗೊಳಿಸಲಾಗುವುದು. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಅಭಿವೃದ್ಧಿ ಪಥದತ್ತ ದೃಢ ಹೆಜ್ಜೆ ಇಡಲಾಗಿದೆ. ವರದಾ ನದಿಯಿಂದ ನೀರನ್ನು ಎತ್ತಿ 105 ಕೋಟಿ ರೂ. ವೆಚ್ಚದಲ್ಲಿ 31 ಕೆರೆಗಳನ್ನು ತುಂಬಿಸುವ ಯೋಜನೆ ಲೋಕಾರ್ಪಣೆ ಮಾಡಲಾಗಿದೆ. ತಾಲೂಕಿನ ಹಲವು ಗ್ರಾಮಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ಹೆಚ್ಚಳ ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಸೊರಬ ತಾಲೂಕಿನಲ್ಲಿ ಹಲವು ಯೋಜನೆಗಳ ಜಾರಿಗೊಳಿಸಲಾಗಿದೆ. 9 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗದ 15 ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳವಿ ಗ್ರಾಮದಲ್ಲಿ ನೂತನ ರೈತ ಸಂಪರ್ಕ ಕೇಂದ್ರ, ಗುಡವಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ, ಭಾರಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಲೋಕಾರ್ಪಣೆ ಮಾಡಲಾಗಿದೆ. 71 ಗ್ರಾಮಗಳಲ್ಲಿ 13.40 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮಾರು 54 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ, ವೇ ಬ್ರಿಡ್ಜ್, ಶಾಲಾ ಕೊಠಡಿ, ವಿದ್ಯುತ್ ಉಪಕೇಂದ್ರ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ. ‌ರಾಘವೇಂದ್ರ, ನಗರಾಭಿವೃದ್ಧಿ ಸಚಿವ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...