ಬೆಳಗಾವಿ: ಆರನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ ಎಂದು ಬೆಳಗಾವಿ ತಾಲೂಕಿನ ಮುತ್ನಾಳದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಕೋವಿಡ್ ಆರ್ಥಿಕ ಸಂಕಷ್ಟದಲ್ಲಿ ಕೂಡ ಸಾರಿಗೆ ನೌಕರರಿಗೆ ವೇತನ ನೀಡಲಾಗುತ್ತಿದೆ. ದಯಮಾಡಿ ಹಠ ಬಿಡಿ, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಹೇಳಿದ್ದಾರೆ.
ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುತ್ತೇವೆ. ಅದು ಬೇರೆ ವಿಷಯ. ಬೇಡಿಕೆಗಳ ಬಗ್ಗೆ ಕುಳಿತು ಚರ್ಚೆ ಮಾಡೋಣ. ಜನತೆಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.
ಆರನೇ ವೇತನ ಜಾರಿ ಪ್ರಶ್ನೆಯೇ ಇಲ್ಲ. ಇದು ಅಸಾಧ್ಯ. ಶೇಕಡ 8 ರಷ್ಟು ವೇತನ ಹೆಚ್ಚಳ ಮಾಡಲು ಯೋಚಿಸಿದ್ದು ಅದನ್ನು ಕೊಡುತ್ತೇವೆ. ಉದ್ದೇಶಪೂರ್ವಕವಾಗಿ ಮುಷ್ಕರ ಮಾಡಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿಯೇ ಮುಷ್ಕರ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.